
ಪ್ರಜಾವಾಣಿ ವಾರ್ತೆ
ಬೆಂಗಳೂರು: ಶೇಷಾದ್ರಿಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಓಕಳಿಪುರ ರೈಲ್ವೆ ಪ್ಯಾರಲಲ್ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದು ವೃದ್ಧೆ ಮೃತಪಟ್ಟಿದ್ದಾರೆ.
ಶ್ರೀರಾಂಪುರದ ನಿವಾಸಿ ಲಲಿತಮ್ಮ (61) ಮೃತಪಟ್ಟವರು.
ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಲಲಿತಮ್ಮ ಅವರು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಅದೇ ವೇಳೆ ವೇಗವಾಗಿ ಬಂದ ಟ್ರಕ್ ಅವರಿಗೆ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ಅವರ ತಲೆಯ ಮೇಲೆಯೇ ಟ್ರಕ್‌ನ ಚಕ್ರಗಳು ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಟ್ರಕ್ ಜಪ್ತಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಶೇಷಾದ್ರಿಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.