ADVERTISEMENT

ನೆಲಮಂಗಲ: ಕಾರು–ಬೈಕ್ ಸರಣಿ ಅಪಘಾತ

​ಪ್ರಜಾವಾಣಿ ವಾರ್ತೆ
Published 13 ಜುಲೈ 2025, 15:39 IST
Last Updated 13 ಜುಲೈ 2025, 15:39 IST
ಸರಣಿ ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು
ಸರಣಿ ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು   

ನೆಲಮಂಗಲ: ತಾಲ್ಲೂಕಿನ ಟಿ.ಬೇಗೂರು ಬಳಿ ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಐದು ಕಾರು, ಒಂದು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಯಾವುದೇ ಸಾವು–ನೋವು ಸಂಭವಿಸಿದ ವರದಿಯಾಗಿಲ್ಲ.

ತಾಲ್ಲೂಕಿನ ಟಿ.ಬೇಗೂರು ಬಳಿ ಅಪಘಾತ ನಡೆದಿದ್ದು, ಬೈಕ್ ಸವಾರ ತಿರುವು ತೆಗೆದು ತೆಗೆದುಕೊಂಡು (ಯು ಟರ್ನ್‌) ಬಲಕ್ಕೆ ಚಲಿಸುವ ವೇಳೆ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿಯಾಗಿವೆ. ಘಟನೆಯಲ್ಲಿ ಬೈಕ್ ಸವಾರ ನೆಲಕ್ಕೆ ಬಿದ್ದಿದ್ದಾನೆ. ಆದರೆ ಯಾವುದೇ ತೊಂದರೆಯಾಗಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಪುಟ್ಟ ಗಾಯಗಳಾಗಿವೆ.

ಅಪಘಾತದಿಂದ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸರು ದಟ್ಟಣೆ ನಿಯಂತ್ರಿಸಿದರು. ಅಪಘಾತ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.