ಬೆಂಗಳೂರು: ಮಹದೇವಪುರ ಹಾಗೂ ಕಾಟನ್‌ಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ, ಕೊಡಿಗೇಹಳ್ಳಿಯ ನಿವಾಸಿ ಮೆಹಬೂಬ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶನಿವಾರ ಬೆಳಿಗ್ಗೆ ಬೆಳ್ತೂರು–ಕೊಡಿಗೇಹಳ್ಳಿ ರಸ್ತೆಯಲ್ಲಿ ಮೆಹಬೂಬ್ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಆ ವೇಳೆ ವೇಗವಾಗಿ ಬಂದ ಟ್ಯಾಂಕರ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಕಾಟನ್‌ಪೇಟೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಪಾದಚಾರಿ ಮಹಿಳೆ ಮೃತಪಟ್ಟಿದ್ದಾರೆ.
ಕಾಟನ್‌ಪೇಟೆ ಬಳಿ ರಸ್ತೆ ಮಧ್ಯೆ ನಿಲುಗಡೆ ಮಾಡಿದ್ದ ಸರಕು ಸಾಗಣೆ ವಾಹನವನ್ನು ಪಕ್ಕಕ್ಕೆ ನಿಲುಗಡೆ ಮಾಡಲು ಮುಂದಾದ ವೇಳೆ ನಿಯಂತ್ರಣ ತಪ್ಪಿ, ಏಳು ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ.
ಆಟೊ ಚಾಲಕ ಕಿರಣ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ಹೇಳಿದರು.
ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.