
ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ಲಾರಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಜಸ್ಥಾನದ ವಿವೇಕ್ ಕುಮಾರ್(26) ಮತ್ತು ಪ್ರದೀಪ್ (21) ಮೃತರು.
ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ರಾಜಸ್ಥಾನದಿಂದ ಎಂಟು ವರ್ಷಗಳ ಹಿಂದೆ ಬಂದು ಮಾದನಾಯಕನಹಳ್ಳಿ ಸಮೀಪದ ಕುದುರೆಗೆರೆ ಕಾಲೊನಿಯಲ್ಲಿ ವಾಸವಿದ್ದರು. ಇಬ್ಬರೂ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ತಡರಾತ್ರಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಏಕಾಏಕಿ ಕಾರೊಂದು ಎದುರಿಗೆ ಬಂದಿತ್ತು. ಕಾರಿಗೆ ದಾರಿ ಮಾಡಿಕೊಡಲು ಹೋಗಿ ರಸ್ತೆಬದಿಯಲ್ಲಿ ಯಾವುದೇ ಸಿಗ್ನಲ್‌ಗಳನ್ನು ಹಾಕದೆ ನಿಲುಗಡೆ ಮಾಡಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ತಲೆ ಹಾಗೂ ದೇಹದ ಇತರೆ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿತ್ತು. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಜಪ್ತಿ ಮಾಡಲಾಗಿದೆ. ಚಾಲಕನ ಪತ್ತೆಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.