ಸಾವು
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಎಲೆಕ್ಟ್ರಾನಿಕ್‍ಸಿಟಿಯ ಶಾಂತಿಪುರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿಯಾದ ಪರಿಣಾಮ ಅವರು ಮೃತಪಟ್ಟಿದ್ದಾರೆ.
ಹೀರಾನಾಯ್ಕ್ (60) ಮೃತಪಟ್ಟ ಪಾದಚಾರಿ.
ಶಾಂತಿಪುರ ನಿವಾಸಿಯಾದ ಹೀರಾನಾಯ್ಕ್ ಅವರು ಮನೆಯ ಸಮೀಪದ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಆಗ, ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಹೀರಾನಾಯ್ಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಎಲೆಕ್ಟ್ರಾನಿಕ್‍ಸಿಟಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.