ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ: ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 20:01 IST
Last Updated 10 ನವೆಂಬರ್ 2021, 20:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು 2020ರ ಅಕ್ಟೋಬರ್‌–ನವೆಂಬರ್‌ನಲ್ಲಿ ನಡೆದಿದ್ದ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ 56ನೇ ಮಿನಿ ಘಟಿಕೋತ್ಸವ ಪ್ರಮಾಣ ಪತ್ರ ಪಡೆಯದೇ ಇರುವವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಈಗಾಗಲೇ ಪದವಿ ಪರೀಕ್ಷಾ ಶುಲ್ಕದ ಜೊತೆಯಲ್ಲಿ ಘಟಿಕೋತ್ಸವ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಟ್ಟಿರುವ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯದ ವೆಬ್‌ಸೈಟ್‌ www.bangaloreuniversity.ac.in ನಲ್ಲಿ ಅರ್ಜಿ ನಮೂನೆಗಳು ದೊರೆಯಲಿವೆ.

‘ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನುದಂಡ ರಹಿತವಾಗಿ ಇದೇ 30ರೊಳಗೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಿಗೆ ಹಾಗೂ ಸ್ನಾತಕ/ಸ್ನಾತಕೋತ್ತರ ಕಾಲೇಜುಗಳ ಪ್ರಾಂಶುಪಾಲರಿಗೆ ಸಲ್ಲಿಸಬೇಕು. ₹200 ದಂಡ ಸಹಿತವಾಗಿ ಅರ್ಜಿ ಸಲ್ಲಿಸಲು ಡಿಸೆಂಬರ್‌ 6 ಕೊನೆಯ ದಿನ. ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕ/ಸ್ನಾತಕೋತ್ತರ ಕಾಲೇಜುಗಳ ಪ್ರಾಂಶುಪಾಲರು ಪರಿಶೀಲಿಸಿದ ಅರ್ಜಿಗಳನ್ನು ಡಿಸೆಂಬರ್‌ 10ರೊಳಗೆ ಆನ್‌ಲೈನ್‌ ರಶೀದಿ ಸಮೇತ ವಿಶ್ವವಿದ್ಯಾಲಯಕ್ಕೆ ಕಳುಹಿಸಬೇಕು’ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.