ADVERTISEMENT

‘ಕನ್ನಡ ಬೋಧನೆಗೆ ತೊಂದರೆಯಾಗಿಲ್ಲ’

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 19:39 IST
Last Updated 8 ಜುಲೈ 2022, 19:39 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿ ಪದವಿ ತರಗತಿಗಳ ಎರಡನೇ

ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಕನ್ನಡ ಬೋಧನೆಗೆ ಯಾವುದೇ ರೀತಿ ತೊಂದರೆಯಾಗಿಲ್ಲ

ಎಂದು ಕುಲಸಚಿವ ಪ್ರೊ. ಎಂ. ಕೊಟ್ರೇಶ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ADVERTISEMENT

‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ಪದವಿ ಪಠ್ಯ ಪುಸ್ತಕಕ್ಕೂ ಪರದಾಟ’ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ‘ಪ‍ಠ್ಯಕ್ರಮದ ಪರಿವಿಡಿ ಹಾಗೂ ಸಾರಾಂಶವನ್ನು ಮೇ 25ರಂದು ಪಿಡಿಎಫ್‌ ಅನ್ನು ವಾಟ್ಸ್‌ಆ್ಯಪ್‌ ಮೂಲಕ ಕನ್ನಡ ಭಾಷಾ ಶಿಕ್ಷಕರಿಗೆ ಕಳುಹಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಪಠ್ಯಕ್ರಮದ ಪರಿವಿಡಿ ಹಾಗೂ ಸಾರಾಂಶದಂತೆ ಕನ್ನಡ ಭಾಷಾ ಶಿಕ್ಷಕರು ವಿಷಯವನ್ನು ಗ್ರಂಥಾಲಯ ಹಾಗೂ ವೆಬ್‌ಸೈಟ್‌ಗಳಲ್ಲಿ ಪೂರಕ ಮಾಹಿತಿಯನ್ನು ಪಡೆದುಕೊಂಡು ವಿದ್ಯಾರ್ಥಿಗಳಿಗೆ ಪಾಠ ಭೋದಿಸುವುದು ಮಾಡುವುದು ಸಂಬಂಧಿಸಿದ ಶಿಕ್ಷಕರ ಕರ್ತವ್ಯವಾಗಿದೆ. ಪಠ್ಯಪುಸ್ತಕಗಳನ್ನು ಮುದ್ರಿಸಿಕೊಡಬೇಕು ಎನ್ನುವುದು ನಿಯಮಗಳಿರುವುದಿಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.