ADVERTISEMENT

ಬೆಂಗಳೂರು ವಿ.ವಿ: ದೂರು ವಾಪಸ್‌ ಪಡೆಯಲು ಒತ್ತಾಯ- ವಿದ್ಯಾರ್ಥಿಗಳಿಂದ ಧರಣಿ ಆರಂಭ

ಬೆಂಗಳೂರು ವಿ.ವಿ: ದೂರು ವಾಪಸ್‌ ಪಡೆಯಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಮೇ 2022, 19:52 IST
Last Updated 30 ಮೇ 2022, 19:52 IST
ಬೆಂಗಳೂರು ವಿ.ವಿಯ ಜ್ಞಾನಭಾರತಿ ಆವರಣದಲ್ಲಿ ಸೋಮವಾರ ವಿದ್ಯಾರ್ಥಿಗಳು ಧರಣಿ ನಡೆಸಿದರು  -ಪ್ರಜಾವಾಣಿ ಚಿತ್ರ
ಬೆಂಗಳೂರು ವಿ.ವಿಯ ಜ್ಞಾನಭಾರತಿ ಆವರಣದಲ್ಲಿ ಸೋಮವಾರ ವಿದ್ಯಾರ್ಥಿಗಳು ಧರಣಿ ನಡೆಸಿದರು  -ಪ್ರಜಾವಾಣಿ ಚಿತ್ರ   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೋಮ ವಾರದಿಂದ ಧರಣಿ ಆರಂಭಿ ಸಿದ್ದಾರೆ.

ಇಬ್ಬರು ಸಂಶೋಧನಾ ವಿದ್ಯಾರ್ಥಿ ಗಳ ವಿರುದ್ಧ ಹಣಕಾಸು ಅಧಿಕಾರಿ (ಪ್ರಭಾರ) ಆರ್‌. ಜಯಲಕ್ಷ್ಮಿ ಅವರು ಜ್ಞಾನಭಾರತಿ ಪೊಲೀಸ್‌ ಠಾಣೆಗೆ ನೀಡಿರುವ ದೂರು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಧರಣಿ
ನಡೆಸುತ್ತಿದ್ದಾರೆ.

ಜ್ಞಾನಭಾರತಿ ಆವರಣದಲ್ಲಿನ ಎಲ್ಲ ತರಗತಿಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿ ಗಳು, ಆಡಳಿತ ಕಚೇರಿ ಕಟ್ಟಡದ ಮುಂಭಾಗ ಧರಣಿ ನಡೆಸಿದರು. ಹಣಕಾಸು ಅಧಿಕಾರಿಗಳು ಮತ್ತು ಕುಲಪತಿ ಅವರ ವಿರುದ್ಧ ಫಲಕಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದರು.

ADVERTISEMENT

‘ಮುಖ್ಯಮಂತ್ರಿ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಇತ್ಯರ್ಥ ಗೊಳಿಸಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಬೇಕು. ವಿಶ್ವವಿದ್ಯಾಲಯದ ಅಭಿವೃದ್ಧಿ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಸ್ವಾಯತ್ತ ಸಂಸ್ಥೆಯಾಗಿರುವ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದ (ಯುವಿಸಿಇ) ಮೆಕ್ಯಾನಿಕಲ್‌ ವಿಭಾಗದ ಕಟ್ಟಡ ನಿರ್ಮಾಣಕ್ಕೆ ವರ್ಗಾಯಿಸಲು ಕೈಗೊಂಡಿರುವ ನಿರ್ಧಾರವನ್ನು ರದ್ದುಪಡಿಸುವ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು’ ಎಂದು ಒತ್ತಾಯಿಸಿದರು.

‘ಮಂಗಳವಾರ ದೂರು ವಾಪಸ್‌ ಪಡೆಯುವುದಾಗಿ ಹಣಕಾಸು ಅಧಿಕಾರಿ ಅವರು ಭರವಸೆ ನೀಡಿದ್ದಾರೆ. ಕುಲಪತಿ ಅವರು ಸಹ ಈಗ ನಡೆದಿರುವ ಘಟನೆಯನ್ನು ಸರಿಪಡಿಸುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ದೂರು ವಾಪಸ್‌ ಪಡೆಯದಿದ್ದರೆ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿ`ಗಳ ಒಕ್ಕೂಟದ ಎನ್‌. ಲೋಕೇಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.