ADVERTISEMENT

ನಿರ್ಲಕ್ಷ್ಯ ವಹಿಸಿದರೆ ಕ್ರಮ: ಜೆ. ಮಂಜುನಾಥ್‌

ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುಷ್ಠಾನದ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 23:01 IST
Last Updated 3 ಸೆಪ್ಟೆಂಬರ್ 2021, 23:01 IST

ಬೆಂಗಳೂರು: ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಎಚ್ಚರಿಕೆ ನಿಡಿದರು.

ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುಷ್ಠಾನ ಕುರಿತು ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ನಿಗದಿತ ಗಡುವಿನೊಳಗೆ ಅನುದಾನ ಬಳಕೆಗೆ ಎಲ್ಲರೂ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ತೋರುವವರು ಮತ್ತು ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಿಗೆ ಆಹಾರ ಧಾನ್ಯ ಪೂರೈಕೆಯನ್ನು ಸ್ಥಗಿತಗೊಳಿಸುವ ಕುರಿತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತರಿಗೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಕ್ಷರ ದಾಸೋಹ ಯೋಜನೆಯಡಿ ಪೂರೈಸುವ ಆಹಾರ ಧಾನ್ಯಗಳ ಗುಣಮಟ್ಟ ಪರೀಕ್ಷಿಸುವಂತೆಯೂ ನಿರ್ದೇಶನ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.