ಬೆಂಗಳೂರು: ಬ್ಯಾಡರಹಳ್ಳಿ ಹಾಗೂ ಅನ್ನಪೂರ್ಣೇಶ್ವರಿ ನಗರದಲ್ಲಿ ರಾತ್ರಿ ವೇಳೆ ಮನೆ ಎದುರು ನಿಲುಗಡೆ ಮಾಡಿದ್ದ ವಾಹನಗಳ ಗಾಜು ಒಡೆದು ಹಾನಿಗೊಳಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬ್ಯಾಡರಹಳ್ಳಿಯ ರತ್ನನಗರ ನಿವಾಸಿ ಜಯಂತ್(19), ಲಿಖಿತ್(18), ಕಾಮಾಕ್ಷಿಪಾಳ್ಯದ ಗಗನ್(23) ಬಂಧಿತರು. ಕಾನೂನು ಸಂಘರ್ಷಕ್ಕೆ ಒಳಗಾದ ಮೂವರನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಇತರೆ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಸೆ.24 ಮತ್ತು ಸೆ.25ರಂದು ಬ್ಯಾಡರಹಳ್ಳಿ ಮತ್ತು ಅನ್ನಪೂರ್ಣೇಶ್ವರಿ ನಗರದಲ್ಲಿ ಆರೋಪಿಗಳು ಮಾರಕಾಸ್ತ್ರ ಹಿಡಿದು ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ಸುಮಾರು 25ಕ್ಕೂ ಹೆಚ್ಚು ವಾಹನಗಳನ್ನು ಜಖಂಗೊಳಿಸಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.