ಬೆಂಗಳೂರು: ಬ್ಯಾಡರಹಳ್ಳಿ ಸೇರಿ ನಗರದ ವಿವಿಧೆಡೆ ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ವಾಹನಗಳ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹಾನಿ ಮಾಡಿದ್ದಾರೆ.
ಸುಮಾರು 20ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಇದೀಗ ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
ಬ್ಯಾಡರಹಳ್ಳಿಯ ರಸ್ತೆಬದಿ ನಿಲುಗಡೆ ಮಾಡಲಾಗಿದ್ದ ಕಾರುಗಳ ಗಾಜುಗಳನ್ನು ಆರೋಪಿಗಳು ಒಡೆದು ಹಾನಿ ಮಾಡಿದ್ದಾರೆ. 15 ಕಾರುಗಳು, 1 ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ. ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಅನ್ನಪೂರ್ಣೇಶ್ವರಿ ನಗರದ ಮುದ್ದಯ್ಯನ ಪಾಳ್ಯದಲ್ಲಿ ಬುಧವಾರ ರಾತ್ರಿ ಆರೋಪಿಗಳು ದೊಣ್ಣೆ ಹಿಡಿದು ತಿರುಗಾಡುತ್ತಾ ರಸ್ತೆಬದಿಯಲ್ಲಿ ನಿಲ್ಲಿಸಿದ್ದ 6 ಕಾರುಗಳು ಹಾಗೂ 1 ಆಟೊರಿಕ್ಷಾಕ್ಕೆ ಹಾನಿ ಮಾಡಿದ್ದಾರೆ.
ನಂತರ, ಮಾಗಡಿ ರಸ್ತೆಗೆ ತೆರಳಿ ಅಲ್ಲೂ ರಸ್ತೆಬದಿಯಲ್ಲಿ ನಿಲುಗಡೆ ಮಾಡಿದ್ದ ಹಾಲಿನ ಕ್ಯಾಂಟರ್ ವಾಹನದೊಳಗೆ ಮಲಗಿದ್ದ ಚಾಲಕನನ್ನು ಬೆದರಿಸಿ ಅವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಹಾಗೂ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.