ಬೆಂಗಳೂರು: ಕಾಟನ್‌ಪೇಟೆ ಮುಖ್ಯರಸ್ತೆಯ ಹೊಟೇಲ್ ಮಹಾವೀರ್ ಎದುರಿನ ಗೋದಾಮಿನಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿ, ಅಲ್ಲಿದ್ದ ಕೆಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂಬುದು ಕಂಡುಬಂದಿದೆ. ಕಾಟನ್‌ಪೇಟೆ ಹಾಗೂ ಉಪ್ಪಾರಪೇಟೆ ಠಾಣೆಯ ಪೊಲೀಸರು ಸ್ಥಳೀಯರ ಜತೆಗೆ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಲು ಯಶಸ್ವಿಯಾದರು.
ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.