ಬೆಂಗಳೂರು: ಜಲಮಂಡಳಿಯು ಶುಕ್ರವಾರ (ಡಿ.26) ಬೆಳಿಗ್ಗೆ 09.30 ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಮಂಡಳಿಯ ಅಧ್ಯಕ್ಷ ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ಆಯೋಜಿಸಿದೆ.
ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639.
ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರು ನೀಡಲು ಕೋರಲಾಗಿದೆ.
ಬೆಂಗಳೂರು: ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭವನ್ನು ಜನವರಿ 4ರಂದು ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಜಿ. ರಮೇಶ್ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಲ್ಹಾದ ಜೋಶಿ, ಗಿರಿರಾಜ್ ಸಿಂಗ್, ಎಚ್.ಡಿ. ಕುಮಾರಸ್ವಾಮಿ, ಸಂಸದ ತೇಜಸ್ವಿ ಸೂರ್ಯ, ಶಾಸಕ ರಿಜ್ವಾನ್ ಅರ್ಷದ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು (ಯುವಿಸಿಇ) 2025–26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ.
ನಾಲ್ಕನೇ ಸೆಮಿಸ್ಟರ್‌ನ ಬಿ.ಟೆಕ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ ವಿಷಯ ಕುರಿತು ಬೋಧನೆ ಮಾಡಲು ಅರ್ಹ ಅಭ್ಯರ್ಥಿಗಳು www.uvce.karnataka.gov.in ವೆಬ್‌ಸೈಟ್‌ನಲ್ಲಿರುವ ಅರ್ಜಿ ನಮೂನೆ ಪಡೆದು ಡಿ. 29ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ: ಕುಲಸಚಿವರು, ಯುವಿಸಿಇ, ಕೆ.ಆರ್ ವೃತ್ತ, ಬೆಂಗಳೂರು–560 001
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.