ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಆಯುಧ ಹಿಡಿದು ಓಡಾಡುತ್ತಾ ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟು ಮಾಡಿದ್ದ ಆರೋಪಿಯನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನ್ಯೂ ಬಾಗಲೂರು ಲೇಔಟ್ ನಿವಾಸಿ ಶರತ್ (33) ಬಂಧಿತ ಆರೋಪಿ.
ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಆರೋಪಿ, ಆಯುಧ ಹಿಡಿದು ಓಡಾಟ ನಡೆಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು. ಆ ವಿಡಿಯೊ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣ ದಾಖಲಾದ ಮಾಹಿತಿ ಗೊತ್ತಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಆತನಿದ್ದ ಸ್ಥಳವನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.