ಬೆಂಗಳೂರು: ಕೊಡಗಿನ ಸಮಸ್ಯೆಗಳು ಎಂಬ ವಾಟ್ಸ್‌ಆ್ಯಪ್ ಗ್ರೂಪ್ ಆಡ್ಮಿನ್ ಸೋಮವಾರಪೇಟೆ ಗೋಣಿಮರೂರು ಮೂಲದ ವಿನಯ್ ಸೋಮಯ್ಯ (39) ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯಲ್ಲಿ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜಕೀಯ ಪ್ರೇರಿತರಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿನಯ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಕೊಡಗು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ಮುಂದಿನ ತನಿಖೆಯನ್ನು ಕೊಡಗು ಪೊಲೀಸರು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.