ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಗೊಂಡನಹಳ್ಳಿಯ ಮನೆಯೊಂದರಲ್ಲಿ ತಾಯಿ ಹಾಗೂ ಮಗಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಚಿತಾ ರೆಡ್ಡಿ ಹಾಗೂ ಅವರ ಪುತ್ರಿ ಶ್ರೀಜಾ ರೆಡ್ಡಿ (24) ಆತ್ಮಹತ್ಯೆ ಮಾಡಿಕೊಂಡವರು.
ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಆಂಧ್ರ ಪ್ರದೇಶದ ರಚಿತಾ ರೆಡ್ಡಿ ಕುಟುಂಬವು ನಾಗಗೊಂಡನಹಳ್ಳಿಯಲ್ಲಿ ನೆಲಸಿತ್ತು.
ಪುತ್ರಿ ಮಲಗಿದ್ದ ಕೊಠಡಿಗೆ ಸೋಮವಾರ ಬೆಳಿಗ್ಗೆ 10.30ರ ಸುಮಾರಿಗೆ ತಾಯಿ ತೆರಳಿ ನೋಡಿದಾಗ ಶ್ರೀಜಾ ರೆಡ್ಡಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂತು. ಘಟನೆಯಿಂದ ಆಫಾತಕ್ಕೆ ಒಳಗಾದ ರಚಿತಾ ರೆಡ್ಡಿ ಅವರು ಕೆಲಸಕ್ಕೆ ತೆರಳಿದ್ದ ಪತಿ ಶ್ರೀನಿವಾಸ ರೆಡ್ಡಿ ಅವರಿಗೆ ಮಾಹಿತಿ ನೀಡಿದ್ದರು. ನಂತರ, ರಚಿತಾ ಅವರೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
‘ಶ್ರೀಜಾ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ. ತೆಲುಗಿನಲ್ಲಿ ಬರೆದಿರುವ ಮರಣಪತ್ರವು ಸಿಕ್ಕಿದೆ. ಅದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು. ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.