ಹರೀಶ್
ಬೆಂಗಳೂರು: ಶಾಪಿಂಗ್‌ಗೆ ಹೋಗಿ ಮನೆಗೆ ಬಂದಿದ್ದ ಪತ್ನಿಯ ಜತೆಗೆ ಗಲಾಟೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ್ದ ಪತಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹರೀಶ್ ಬಂಧಿತ ಆರೋಪಿ. ಪದ್ಮಜಾ (29) ಕೊಲೆಯಾದವರು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ದಂಪತಿ ಬೊಮ್ಮನಹಳ್ಳಿಯಲ್ಲಿ ನೆಲಸಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪದ್ಮಜಾ ಅವರು ಸಾಫ್ಟ್‌ವೇರ್ ಎಂಜಿನಿಯರ್. ಹರೀಶ್ ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
‘ಹರೀಶ್ ಅವರು ಇತ್ತೀಚೆಗೆ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮದ್ಯ ಸೇವಿಸಿ ಮನೆಗೆ ಬಂದು ಗಲಾಟೆ ಮಾಡುತ್ತಿದ್ದರು. ಹರೀಶ್ ಹತ್ತು ದಿನಗಳ ಹಿಂದೆ ಕೆಲಸಕ್ಕೆ ಸೇರಿದ್ದರು. ಜುಲೈ 6ರಂದು ಶಾಪಿಂಗ್‌ಗೆ ಹೋಗಿ ಮನೆಗೆ ಬಂದಿದ್ದ ಪತ್ನಿಯೊಂದಿಗೆ ಜಗಳವಾಡಿದ್ದರು. ಇಬ್ಬರ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿ, ಪತ್ನಿಯನ್ನು ಹರೀಶ್ ಕೆಳಕ್ಕೆ ಬೀಳಿಸಿ ಕತ್ತು ಹಿಸುಕಿ ಕೊಲೆ ಮಾಡಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿತ್ತು. ಅದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.