ADVERTISEMENT

ಬೆಂಗಳೂರು: ಪತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಪತ್ನಿಯ ಬಂಧನ

ಮುನ್ನೇನಕೊಳಾಲು ಬಳಿಯ ಸಿಲ್ವರ್‌ಪಾರ್ಕ್ ಲೇಔಟ್‌ನಲ್ಲಿ ಕೃತ್ಯ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 15:38 IST
Last Updated 25 ಡಿಸೆಂಬರ್ 2025, 15:38 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಪತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಪತ್ನಿಯನ್ನು ವರ್ತೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಅಸ್ಸಾಂನ ರಾಜೀವ್ ರಜಪೂತ್ (29) ಕೊಲೆಯಾದವರು. ಅವರ ಪತ್ನಿ ರುಬಿನಾ ಕೌರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಒಂದು ಮಗುವಿದೆ. ಎರಡು ವರ್ಷಗಳ ಹಿಂದೆ ನಗರಕ್ಕೆ ಬಂದು ಮುನ್ನೇನಕೊಳಾಲು ಬಳಿಯ ಸಿಲ್ವರ್ ಪಾರ್ಕ್ ಲೇಔಟ್‍ ಬಾಡಿಗೆ ಮನೆಯಲ್ಲಿ ನೆಲಸಿದ್ದರು.

‘ರಾಜೀವ್ ರಜಪೂತ್ ಅವರು ಯಾವುದೇ ಕೆಲಸಕ್ಕೆ ಹೋಗದೆ ನಿತ್ಯ ಪಾನಮತ್ತರಾಗಿ ಮನೆಗೆ ಬಂದು ಪತ್ನಿಯ ಜತೆ ಜಗಳ ಆಡುತ್ತಿದ್ದರು. ಕುಟುಂಬ ನಿರ್ವಹಣೆಗಾಗಿ ತಾನು ಕೆಲಸಕ್ಕೆ ಹೋಗುವುದಾಗಿ ರುಬಿನಾ ಕೌರ್ ಹೇಳಿದ್ದರೂ ಪತಿ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಹಣಕಾಸು ಸಮಸ್ಯೆಯಾಗಿ ದಂಪತಿ ಮಧ್ಯೆ ಜಗಳವಾಗುತ್ತಿತ್ತು’ ಎಂದು ಪೊಲೀಸರು ಹೇಳಿದರು.

‘ರಾಜೀವ್ ರಜಪೂತ್, ಗುರುವಾರ ಬೆಳಿಗ್ಗೆಯೇ ಮದ್ಯ ಸೇವಿಸಿ ಬಂದು ಪತ್ನಿಯ ಜತೆ ಜಗಳವಾಡಿದ್ದರು. ಜಗಳ ವಿಕೋಪಕ್ಕೆ ಹೋಗಿ ರುಬಿನಾ ಕೌರ್ ಅವರು ಪತಿಗೆ ಚಾಕು ಇರಿದು ಕೊಲೆ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.