
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ಎದುರು ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಸ್ಸಾಂ ಮೂಲದ ಶಿಬಾ ರಾಯ್ (24) ಮೃತಪಟ್ಟವರು.
ಶಿಬಾ ಅವರು ಅರಕೆರೆಯ ವೀರಾಂಜನೇಯ ದೇವಸ್ಥಾನ ಬಳಿಯ ಬಾಡಿಗೆ ಮನೆಯಲ್ಲಿ ಸ್ನೇಹಿತನ ಜತೆಗೆ ನೆಲಸಿದ್ದರು. ಶುಕ್ರವಾರ ರಾತ್ರಿ 11.15ರ ಸುಮಾರಿಗೆ ಶಿಬಾ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಆಗ ವೇಗವಾಗಿ ಬಂದ ಬಸ್‌ವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿಬಾ ಅವರು ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಖಾಸಗಿ ಬಸ್ ಜಪ್ತಿ ಮಾಡಿಕೊಂಡು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಮೈಕೊ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.