ADVERTISEMENT

ಬೆಂಗಳೂರು: ಡಯಾಲಿಸಿಸ್ ಚಿಕಿತ್ಸೆಗೆ ಹೆದರಿ ವೃದ್ಧೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 15:07 IST
Last Updated 25 ಅಕ್ಟೋಬರ್ 2025, 15:07 IST
   

ಬೆಂಗಳೂರು: ಡಯಾಲಿಸಿಸ್ ಚಿಕಿತ್ಸೆಗೆ ಹೆದರಿ ವೃದ್ಧೆ ರಾಣಿ ಸಿನ್ಹಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹರಳೂರು ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿದೆ ಎಂದು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಹೇಳಿದರು. 

ಜಾರ್ಖಂಡ್​ನ ರಾಂಚಿಯ ರಾಣಿ ಸಿನ್ಹಾ ಅವರು ಪತಿ ಅಜಿತ್ ಕುಮಾರ್ ಸಿನ್ಹಾ ಅವರೊಂದಿಗೆ ಏಳು ವರ್ಷಗಳಿಂದ ಹೂಸ್ಕೂರಿನ ಚೂಡಸಂದ್ರ ಗ್ರಾಮದ ಜಿ.ಆರ್.ಸಂಕಲ್ಪ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ADVERTISEMENT

‘ರಾಣಿ ಅವರು ‌ಕೆಲವು ವರ್ಷದಿಂದ ಮಧುಮೇಹದಿಂದ ಬಳಲುತ್ತಿದ್ದರು. ಎರಡು ವರ್ಷಗಳಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಅ.17ರಂದು ಆಸ್ಪತ್ರೆಗೆ ದಾಖಲಾಗಿದ್ದಾಗ, ಡಯಾಲಿಸಿಸ್ ಮಾಡಿಸಬೇಕು ಎಂಬುದಾಗಿ ಸೂಚಿಸಿ ಮನೆಗೆ ಕಳುಹಿಸಿದ್ದರು. ಡಯಾಲಿಸಿಸ್‌ಗೆ ಹೆದರಿ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದರು.

‘ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಭಯವಾಗುತ್ತಿದೆ. ಇದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂಬುದಾಗಿ ವೃದ್ಧೆ ಬರೆದಿಟ್ಟ ಮರಣಪತ್ರವು ಸಿಕ್ಕಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.