
ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಗಾರ್ಡನ್ ಒಂದನೇ ಕ್ರಾಸ್ ನಿವಾಸಿ ಅರ್ಪಿತಾ (24) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕಾಡುಕೊತ್ತನಹಳ್ಳಿಯ ಪರಮೇಶ್ ಅವರ ಪುತ್ರಿ ಅರ್ಪಿತಾ ಅವರು ಚಿಕ್ಕಪ್ಪ ಬಸವರಾಜ್ ಅವರ ಮನೆಯಲ್ಲಿ ವಾಸವಿದ್ದರು. ವೈದ್ಯಕೀಯ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
‘ಮಾರುಕಟ್ಟೆಗೆ ಹೋಗಲು ಭಾನುವಾರ ಮಧ್ಯಾಹ್ನ ಅರ್ಪಿತಾ ಅವರನ್ನು ಚಿಕ್ಕಮ್ಮ ಕರೆದಿದ್ದರು. ಆಗ ನನಗೆ ಆರೋಗ್ಯ ಸರಿಯಿಲ್ಲ. ಮನೆಯಲ್ಲೇ ಇರುವುದಾಗಿ ಯುವತಿ ಹೇಳಿದ್ದರು’ ಎಂದು ಮೂಲಗಳು ಹೇಳಿದರು.
‘ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಬ್ಬಿಣದ ಕೊಂಡಿಗೆ ದುಪ್ಪಟ್ಟದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ಅರ್ಪಿತಾ ಅವರು ಖಿನ್ನತೆಗೆ ಒಳಗಾಗಿದ್ದರು. ಅದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಶಂಕಿಸಲಾಗಿದೆ.
ಕೆಂಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.