ADVERTISEMENT

ಬೆಂಗಳೂರು | ಪಾನಪುರಿ ತಿನ್ನುವಾಗ ಗಲಾಟೆ: ಹಲ್ಲೆಯಿಂದ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 15:56 IST
Last Updated 25 ಜುಲೈ 2025, 15:56 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ರಾಜಗೋಪಾಲನಗರದ ಬಳಿಯ ಲವಕುಶ ನಗರದಲ್ಲಿ ದುಷ್ಕರ್ಮಿಗಳಿಂದ ಹಲ್ಲೆಯಿಂದ ಗಾಯಗೊಂಡಿದ್ದ ಅರುಣ್‍ಕುಮಾರ್ (24) ಅವರು ಶುಕ್ರವಾರ ಮೃತಪಟ್ಟಿದ್ದಾರೆ.

ADVERTISEMENT

ಅರುಣ್‍ಕುಮಾರ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಕಾರ್ತಿಕ್, ಕುಶಾಲ್ ಮತು ದರ್ಶನ್ ಎಂಬುವರನ್ನು ಬಂಧಿಸಲಾಗಿದೆ. ಲವಕುಶನಗರದ ಅರುಣ್‍ಕುಮಾರ್ ಅವರು ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.‌

ಜುಲೈ 19ರಂದು ಸ್ನೇಹಿತ ರೋಹಿತ್‍ ಅವರ ಜತೆಗೆ ಪಾನಿಪುರಿ ತಿನ್ನಲು ಅರುಣ್‍ಕುಮಾರ್ ಹೋಗಿದ್ದರು. ಆ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಅರುಣ್‌ಕುಮಾರ್ ಅವರ ಮೇಲೆ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅರುಣ್‍ಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಲವಕುಶ ನಗರದ ಆರೋಪಿಗಳು ಪಾನಮತ್ತರಾಗಿ ಅರುಣ್‍ಕುಮಾರ್ ಮತ್ತು ರೋಹಿತ್‍ನ ಜತೆಗೆ ಗಲಾಟೆ ಮಾಡಿ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.