ADVERTISEMENT

ಯುವತಿಯ ವಿಚಾರಕ್ಕೆ ಯುವಕನ ಕೊಲೆಗೆ ಯತ್ನ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 15:54 IST
Last Updated 4 ಸೆಪ್ಟೆಂಬರ್ 2025, 15:54 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಕೊಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ವಿಲ್ಸನ್‌ ಗಾರ್ಡನ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಮೊಹಮ್ಮದ್ ಫಾರ್ದೀನ್‌ (24), ಮೊಹಮ್ಮದ್ ಅಫಾನ್‌ (26), ಮೊಹಮ್ಮದ್ ರಾಯನ್‌ (21) ಹಾಗೂ ಎಂ.ಸಮೀರ್‌ (24) ಬಂಧಿತರು.

ಬಾಬುರ್ ರಾಯನ್‌ ಎಂಬುವವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

‘ಕೊಲೆ ಮಾಡುವ ಉದ್ದೇಶದಿಂದ ಮಾರಕಾಸ್ತ್ರ ಹಿಡಿದು ಬಂದಿದ್ದ ಆರೋಪಿಗಳು, ನನ್ನ ಹಾಗೂ ಅಫ್ರಿನ್ ಮೇಲೆ ಹಲ್ಲೆ ನಡೆಸಿದ್ದರು ಎಂದು ರಾಯನ್ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.