ಬೆಂಗಳೂರು: ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಭಾನುವಾರ ರಾತ್ರಿ ಸಂಭವಿಸಿದ ಅಪಘಾತ ಪ್ರಕರಣ ಸಂಬಂಧ ಬಿಬಿಎಂಪಿಗೆ ಸೇರಿದ ಕಸ ತುಂಬಿಸುವ ಲಾರಿ ಚಾಲಕನನ್ನು ಹಲಸೂರು ಗೇಟ್ ಸಂಚಾರ ಠಾಣೆ ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.
ಶಿವಶಂಕರ್ (38) ಬಂಧಿತ ಚಾಲಕ. ಅಪಘಾತದಲ್ಲಿ ಬಾಣಸವಾಡಿಯಲ್ಲಿ ನೆಲೆಸಿದ್ದ ಟೆಕ್ಕಿಗಳಾದ ಪ್ರಶಾಂತ್ ಹಾಗೂ ಶಿಲ್ಪಾ ಮೃತಪಟ್ಟಿದ್ದರು. ಕೆಆರ್ ವೃತ್ತದಲ್ಲಿ ಅಪಘಾತ ಸಂಭವಿಸಿತ್ತು. ಅಪಘಾತದ ಬಳಿಕ ಶಿವಶಂಕರ್ ಅವರು ಪರಾರಿಯಾಗಿದ್ದರು. ಚಾಲಕ ಶಿವಶಂಕರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.