ADVERTISEMENT

ಬೆಸ್ಕಾಂ ವಿದ್ಯುತ್‌ ಅದಾಲತ್‌ 2,900 ಗ್ರಾಹಕರು ಭಾಗಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2022, 3:19 IST
Last Updated 17 ಜುಲೈ 2022, 3:19 IST
ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಶನಿವಾರ ವಿದ್ಯುತ್‌ ಅದಾಲತ್‌ ನಡೆಯಿತು
ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಶನಿವಾರ ವಿದ್ಯುತ್‌ ಅದಾಲತ್‌ ನಡೆಯಿತು   

ಬೆಂಗಳೂರು: ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 47 ತಾಲ್ಲೂಕುಗಳಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯುತ್ ಅದಾಲತ್‌ನಲ್ಲಿ 2,900 ಗ್ರಾಹಕರು ಭಾಗವಹಿಸಿದ್ದರು.

ಗ್ರಾಹಕರಿಂದ ಸ್ವೀಕರಿಸಿರುವ 1,045 ಮನವಿಗಳ ಪೈಕಿ 330 ಮನವಿಗಳಿಗೆ ಬೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಒದಗಿಸಿದರು. ಉಳಿದ 715 ಮನವಿಗಳನ್ನು ಮುಂದಿನ ಕ್ರಮಕ್ಕಾಗಿ ಮೇಲಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಗ್ರಾಮೀಣ ಭಾಗದ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪ್ರತಿ ತಿಂಗಳ ಮೂರನೇ ಶನಿವಾರದಂದು ವಿದ್ಯುತ್‌ ಅದಾಲತ್‌ ಆಯೋಜಿಸಲಾಗುತ್ತಿದ್ದು, ಜುಲೈನ ಅದಾಲತ್‌ 8 ಜಿಲ್ಲೆಗಳ 47 ತಾಲ್ಲೂಕುಗಳ 89 ಹಳ್ಳಿಗಳಲ್ಲಿ ನಡೆಯಿತು.

ADVERTISEMENT

ವಿದ್ಯುತ್‌ ಸಂಪರ್ಕ, ವಿದ್ಯುತ್‌ ಕಳ್ಳತನ, ಮೀಟರ್‌, ಹೆಚ್ಚುವರಿ ಟ್ರಾನ್ಸ್‌ಫಾರ್ಮರ್‌, ಬಿಲ್ಲಿಂಗ್‌, ವಿದ್ಯುತ್‌ ವ್ಯತ್ಯಯ, ಹೊಸ ಸಂಪರ್ಕ, ಹೊಸ ಟ್ರಾನ್ಸ್‌ಫಾರ್ಮರ್‌, ಎಲ್‌.ಟಿ.ಲೈನ್‌ ಬೇಡಿಕೆ ಸೇರಿ ಹಲವು ಸಮಸ್ಯೆಗಳ ಕುರಿತು ಗ್ರಾಹಕರು ಅದಾಲತ್‌ನಲ್ಲಿ ಅಧಿಕಾರಿಗಳ ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.