ಬೆಸ್ಕಾಂ
ಬೆಂಗಳೂರು: ವಿದ್ಯುತ್ ಬಿಲ್ ಪಾವತಿಗೆ ಬೆಸ್ಕಾಂ ಕಚೇರಿಗಳಲ್ಲಿ ಅಳವಡಿಸಲಾಗಿದ್ದ ಎಟಿಪಿ (ಎನಿ ಟೈಮ್ ಪೇಮೆಂಟ್) ಪಾವತಿ ಯಂತ್ರದ ಸೇವೆಯನ್ನು ಆಗಸ್ಟ್ 1 ರಿಂದ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳು, ಬೆಂಗಳೂರು ಒನ್, ಬೆಸ್ಕಾಂ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್, ಆನ್‌ಲೈನ್ ಪಾವತಿ ವಿಧಾನಗಳಾದ ಬೆಸ್ಕಾಂ ವೆಬ್‌ಸೈಟ್, ಬೆಸ್ಕಾಂ ಮಿತ್ರ ಆ್ಯಪ್ ಮೂಲಕ ವಿದ್ಯುತ್ ಬಿಲ್ ಪಾವತಿಸಬಹುದು. ಸ್ಪಾಟ್ ಬಿಲ್ಲಿಂಗ್ ಡಿವೈಸ್, ಭಾರತ್ ಬಿಲ್ ಪೇಮೆಂಟ್ ಸಿಸ್ಟಮ್ (ಬಿಬಿಪಿಎಸ್), ನೆಫ್ಟ್, ಇಸಿಎಸ್ ಹಾಗೂ ಯುಪಿಐ ಮೂಲಕವೂ ವಿದ್ಯುತ್ ಬಿಲ್‌ಗಳನ್ನು ಪಾವತಿಸಬಹುದಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.