ಬೆಂಗಳೂರು: ಪ್ರವಾಹದಿಂದ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ (ಹೆಸ್ಕಾಂ) ವ್ಯಾಪ್ತಿಯಲ್ಲಿ ಹಾನಿಗೊಳಗಾಗಿರುವ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸಿ, ವಿದ್ಯುತ್ ಸಂಪರ್ಕ ಮರುಕಲ್ಪಿಸುವ ಕಾರ್ಯಕ್ಕೆ ನೆರವಾಗಲು ಬೆಸ್ಕಾಂ ಮುಂದಾಗಿದೆ. ಈ ನಿಟ್ಟಿನಲ್ಲಿ ನಾಲ್ವರು ಎಂಜಿನಿಯರ್ಗಳು ಮತ್ತು 50 ಪವರ್ಮೆನ್ಗಳ ತಂಡವನ್ನು ಸೋಮವಾರ ಕಳುಹಿಸಲಾಯಿತು.
ಹೆಸ್ಕಾಂ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಹಾನಿಗೊಳಗಾಗಿರುವ ವಿದ್ಯುತ್ ಕಂಬಗಳು, ತಂತಿಗಳು ಮತ್ತು ಪರಿವರ್ತಕಗಳನ್ನು ತ್ವರಿತವಾಗಿ ದುರಸ್ತಿಗೊಳಿಸುವ ಕಾರ್ಯದಲ್ಲಿ ಈ ತಂಡ ಕೈಜೋಡಿಸಲಿದೆ.ಹೆಸ್ಕಾಂ ಮನವಿಗೆ ಮೇರೆಗೆ ಬೆಸ್ಕಾಂ ಈ ಕಾರ್ಯಕ್ಕೆ ಮುಂದಾಗಿದ್ದು, ಎರಡು ವಾರ ಈ ತಂಡವು ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.