ADVERTISEMENT

ಕುದುರೆ ಓಟ– ಕ್ರಿಕೆಟ್ ಬೆಟ್ಟಿಂಗ್: ₹1.53 ಲಕ್ಷ ಜಪ್ತಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 16:11 IST
Last Updated 7 ಡಿಸೆಂಬರ್ 2022, 16:11 IST

ಬೆಂಗಳೂರು: ಕುದುರೆ ಓಟ ಹಾಗೂ ಕ್ರಿಕೆಟ್‌ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ₹ 1.53 ಲಕ್ಷ ನಗದು ಹಾಗೂ ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ.

‘ಜ್ಞಾನಭಾರತಿ ಹಾಗೂ ಯಲಹಂಕ ನ್ಯೂ ಟೌನ್‌ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಕುದುರೆ ಓಟದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿ, ವಾಟ್ಸ್‌ಆ್ಯಪ್ ಗ್ರೂಪ್ ಮಾಡಿಕೊಂಡಿದ್ದ. ಮರಿಯಪ್ಪನಪಾಳ್ಯ ಬಸ್‌ ತಂಗುದಾಣ ಬಳಿ ಸುತ್ತಾಡುತ್ತಿದ್ದ ಈತ, ಜನರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದ. ಇನ್ನೊಬ್ಬ ಆರೋಪಿ, ಯಲಹಂಕ ನ್ಯೂ ಟೌನ್‌ನ ಪಾದಚಾರಿ ಮಾರ್ಗಗಳಲ್ಲಿ ಓಡಾಡಿ ಕ್ರಿಕೆಟ್ ಪಂದ್ಯಗಳ ಸೋಲು–ಗೆಲುವು ಲೆಕ್ಕಾಚಾರದಲ್ಲಿ ಜನರಿಂದ ಹಣ ಪಡೆಯುತ್ತಿದ್ದ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.