ADVERTISEMENT

‘ಬಿಜಿಎಸ್‌ ಬ್ರ್ಯಾಂಡ್‌’ ರಾಜ್ಯದ ಹೆಮ್ಮೆ: ಸಿ.ಎಂ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2023, 7:03 IST
Last Updated 15 ಫೆಬ್ರುವರಿ 2023, 7:03 IST

ಬೆಂಗಳೂರು: ‘ವೈದ್ಯಕೀಯ ಶಿಕ್ಷಣ, ಆಸ್ಪತ್ರೆ ಹಾಗೂ ಒಂದೂವರೆ ಲಕ್ಷ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಬಿಜಿಎಸ್‌, ತನ್ನದೇ ಬ್ರ್ಯಾಂಡ್‌ ಸೃಷ್ಟಿಸಿರುವುದು ಕರ್ನಾಟಕದ ಹೆಮ್ಮೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭ, ಹುಳಿಮಾವಿನಲ್ಲಿ ಬಿಜಿಎಸ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಜ್ಯೋತಿರ್ದಾನ ಸಮಾರಂಭವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಲು ಉತ್ತರ ಕರ್ನಾಟಕದ ಜನ ಬಿಜಿಎಸ್ ಆಸ್ಪತ್ರೆಗೆ ನೇರವಾಗಿ ಬರುವಷ್ಟು ಸೌಲಭ್ಯಗಳು ಅಲ್ಲೇ ದೊರೆಯುತ್ತಿವೆ.‌ ಬಿಜಿಎಸ್ ಸಂಸ್ಥೆಗಳು ಉತ್ತರ ಮತ್ತು ದಕ್ಷಿಣ ಬೆಸೆಯುವ ಕೇಂದ್ರವಾಗಿದೆ‌ ಎಂದು ತಿಳಿಸಿದರು.

ADVERTISEMENT

‘ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ನೀಡಿ ಅವನನ್ನು ಸ್ವಾವಲಂಬಿಯನ್ನಾಗಿಸಲು ನಿರ್ಮಲಾನಂದನಾಥ ಸ್ವಾಮೀಜಿ ಮಾರ್ಗದರ್ಶನ ಅಗತ್ಯ. ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಇದು ದೊರೆಯಲಿ’ ಎಂದರು.

ಸಚಿವರಾದ ಆರ್.ಅಶೋಕ, ಡಾ. ಕೆ.ಸುಧಾಕರ್, ಶಾಸಕ ಸತೀಶ್ ರೆಡ್ಡಿ, ಸಾಹಿತಿ ಚಂದ್ರಶೇಖರ ಕಂಬಾರ, ಸಾಹಿತಿ ದೊಡ್ಡರಂಗೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.