ಬೆಂಗಳೂರು: ದೊಮ್ಮಲೂರಿನಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರದಲ್ಲಿ(ಬಿಐಸಿ) ಏಪ್ರಿಲ್ 20ರ ಸಂಜೆ 6 ಗಂಟೆಗೆ ಶೈನಿ ಆಂಟನಿ ಅವರು ಸಾಹಿತಿ ಬಾನು ಮುಷ್ತಾಕ್ ಮತ್ತು ದೀಪಾ ಭಸ್ತಿ ಅವರ ಜತೆ ಸಂವಾದ ನಡೆಸಲಿದ್ದಾರೆ.
ಬಾನು ಮುಷ್ತಾಕ್ ಅವರ ಸಣ್ಣ ಕತೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ 2025ರ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದೀಪಾ ಭಸ್ತಿ ಅವರು ಬಾನು ಅವರ ಕತೆಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.