ADVERTISEMENT

ನಾಳೆ ಭಾರತ್‌ ಬಂದ್; ಬೆಂಗಳೂರಲ್ಲಿ ಖಾಕಿ ಕಾವಲು

ಕೃಷಿ ಕಾಯ್ದೆ, ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 22:29 IST
Last Updated 25 ಸೆಪ್ಟೆಂಬರ್ 2021, 22:29 IST
ಕಮಲ್ ಪಂತ್
ಕಮಲ್ ಪಂತ್   

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರೋಧಿಸಿ ರೈತ ಸಂಘಟನೆಗಳು ಸೋಮವಾರ (ಸೆ. 27) ಭಾರತ್ ಬಂದ್‌ಗೆ ಕರೆ ನೀಡಿದ್ದು, ಅಂದು ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಎಲ್ಲ ವಿಭಾಗದ ಡಿಸಿಪಿಗಳಿಗೆ ಭದ್ರತೆ ಬಗ್ಗೆ ಕೆಲ ಸೂಚನೆ ನೀಡಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್, ‘ಪ್ರತಿಯೊಂದು ಸ್ಥಳಗಳ ಮೇಲೆ ನಿಗಾ ವಹಿಸಿ. ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳಿ’ ಎಂದಿದ್ದಾರೆ.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಕಮಲ್ ಪಂತ್, ‘ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳಲ್ಲಿ ಪೊಲೀಸ್ ಭದ್ರತೆ ಇರಲಿದೆ. ನಗರದ ಪ್ರತಿಯೊಂದು ಠಾಣೆ ವ್ಯಾಪ್ತಿಯಲ್ಲಿ ಗಸ್ತು ಹೆಚ್ಚಳ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ’ ಎಂದರು.

ADVERTISEMENT

ಗೋದಾಮು ಮಾಲೀಕರ ವಿರುದ್ಧ ಕ್ರಮ: ‘ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದ ಗೋದಾಮಿನಲ್ಲಿ ಸಂಭವಿಸಿದ ಪಟಾಕಿ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನಗರದಲ್ಲಿರುವ ಅಕ್ರಮ ಗೋದಾಮುಗಳನ್ನು ಪತ್ತೆ ಮಾಡಲಾಗುತ್ತಿತ್ತು, ಅವರ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಕಮಲ್ ಪಂತ್ ತಿಳಿಸಿದರು.

‘ಪ್ರತಿಯೊಂದು ಗೋದಾಮು ಪರಿಶೀಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಕಸ್ಮಾತ್ ಪುನಃ ಅವಘಡಗಳು ಸಂಭವಿಸಿದರೆ, ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು’ ಎಂದೂ ಅವರು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.