ADVERTISEMENT

ಬಿಇಎಲ್‌ನಿಂದ ಡ್ರೋನ್‌ ನಿಗ್ರಹ ವ್ಯವಸ್ಥೆ ಪೂರೈಕೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2021, 23:21 IST
Last Updated 31 ಆಗಸ್ಟ್ 2021, 23:21 IST

ನವದೆಹಲಿ: ಭಾರತೀಯ ಸೇನೆ, ನೌಕಾ ಪಡೆ ಹಾಗೂ ವಾಯುಪಡೆಗಾಗಿ ಬೆಂಗಳೂರಿನ ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) ಸ್ವದೇಶಿಯಾಗಿ ಅಭಿವೃದ್ಧಿಪಡಿಸಿರುವ ಡ್ರೋನ್‌ ನಿಗ್ರಹ ವ್ಯವಸ್ಥೆಯನ್ನು ತಯಾರಿಸಿಕೊಡಲಿದೆ.

ನೌಕಾಪಡೆಯ ಡ್ರೋನ್‌ ನಿಗ್ರಹ ವ್ಯವಸ್ಥೆಯ (ಎನ್‌ಎಡಿಎಸ್‌) ಪೂರೈಕೆಗಾಗಿ ನೌಕಾಪಡೆಯು ಮಂಗಳವಾರ ಬಿಇಎಲ್‌ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಭಾರತೀಯ ಸೇನೆ ಮತ್ತು ವಾಯುಪಡೆ ಕೂಡ ಇದೇ ರೀತಿ ಒಪ್ಪಂದಕ್ಕೆ ಸಹಿಹಾಕಲಿವೆ. ಈ ತಂತ್ರಜ್ಞಾನವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ.

ಎನ್‌ಎಡಿಎಸ್‌ ಲೇಸರ್‌ ಆಧರಿತ ತಂತ್ರಜ್ಞಾನದ ಮೂಲಕ ಸೂಕ್ಷ್ಮ ಡ್ರೊನ್‌ಗಳನ್ನು ಕೂಡ ಪತ್ತೆ ಹಚ್ಚಿ ನಾಶಪಡಿಸುವ ಸಾಮರ್ಥ್ಯ ಹೊಂದಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ವರ್ಷದ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಮೊದಲ ಬಾರಿಗೆ ಈ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.