ಬೆಂಗಳೂರು: ಮಂಗಳವಾರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ ಲಾಕ್‌ಡೌನ್ ಆಗುತ್ತಿದೆ. ಇದೇ ಸಮಯದಲ್ಲಿ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸಿವಿಲ್ ಪೊಲೀಸ್ ವಾರ್ಡನ್ ಆಗಿ ಕೆಲಸ ಮಾಡಲು ಯುವಜನತೆಗೆ ಆಹ್ವಾನ ನೀಡಿದ್ದಾರೆ.
ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ದೈಹಿಕವಾಗಿ ಸದೃಢವಾದ ಹಾಗೂ ಸೇವಾ ಮನೋಭಾವನೆಯುಳ್ಳ ಯುವಕ ಹಾಗೂ ಯುವತಿಯರಿಗೆ ಸಿವಿಲ್ ಪೊಲೀಸ್ ವಾರ್ಡನ್ ಆಗಲು ಮುಕ್ತ ಅವಕಾಶ ನೀಡಲಾಗುತ್ತಿದೆ’ ಎಂದಿದ್ದಾರೆ.
‘18ರಿಂದ 45 ವರ್ಷದೊಳಗಿನ ವ್ಯಕ್ತಿಗಳು ವಾರ್ಡನ್ ಆಗಲು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಕೊರೊನಾ ವೈರಾಣು ವಿರುದ್ಧದ ಹೋರಾಟದಲ್ಲಿ ಸ್ಥಳೀಯ ಪೊಲೀಸ್ ಜೊತೆಯಲ್ಲಿ ಕೆಲಸ ಮಾಡಬೇಕು’ ಎಂದೂ ಅವರು ತಿಳಿಸಿದ್ದಾರೆ.
ಸ್ವಯಂ ಸೇವಕರಾಗಲು ನೋಂದಣಿ ಮಾಡಿಕೊಳ್ಳಲು ಬೆಂಗಳೂರು ನಗರ ಪೊಲೀಸ್ ಇಲಾಖೆ ವೆಬ್‌ಸೈಟ್ http://bcp.gov.in ಭೇಟಿ ನೀಡುವಂತೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.