ADVERTISEMENT

ಭವಾನಿ ರೇವಣ್ಣ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ: ಪ್ರಕರಣ ಏನು?

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 19:28 IST
Last Updated 14 ಅಕ್ಟೋಬರ್ 2025, 19:28 IST
ಭವಾನಿ ರೇವಣ್ಣ
ಭವಾನಿ ರೇವಣ್ಣ   

ಬೆಂಗಳೂರು: ‘ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಿಂದ ನಮ್ಮನ್ನು ಕೈಬಿಡಬೇಕು’ ಎಂದು ಕೋರಿ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಮತ್ತು ಇನ್ನೊಬ್ಬ ಆರೋಪಿ ಕೆ.ಎ.ರಾಜಗೋಪಾಲ್‌ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

‘ದೋಷಾರೋಪ ಪಟ್ಟಿ ಪರಿಶೀಲಿಸಿದಾಗ ಸಂತ್ರಸ್ತೆಯ ಅಪಹರಣದಲ್ಲಿ ಭವಾನಿ ರೇವಣ್ಣ ಮತ್ತು ಕೆ.ಎ.ರಾಜಗೋಪಾಲ್‌ ಪಾತ್ರದ ಬಗ್ಗೆ ಸಾಕಷ್ಟು ದಾಖಲೆಗಳು ಕಂಡು ಬಂದಿರುವ ಕಾರಣ ಇವರನ್ನು ಈ ಹಂತದಲ್ಲಿ ಆರೋಪ ಮುಕ್ತಗೊಳಿಸಲು ಸಾಧ್ಯವಿಲ್ಲ’ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ಸಂಬಂಧ ಇಬ್ಬರೂ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಕೆ.ಎನ್‌.ಶಿವಕುಮಾರ್ ಈ ಕುರಿತಂತೆ ಆದೇಶಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.