ADVERTISEMENT

ಭೋವಿ ನಿಗಮ: ನಿರ್ದೇಶಕರ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 4 ಮೇ 2022, 17:41 IST
Last Updated 4 ಮೇ 2022, 17:41 IST

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಆರ್‌.ಲೀಲಾವತಿ ಅವರ ಸಹಿ ನಕಲು ಮಾಡಿದ ಆರೋಪದ ಮೇಲೆ ನಿಗಮದ ನಿರ್ದೇಶಕ ರವಿಕುಮಾರ್‌ ವಿರುದ್ಧ ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ‍ಪ್ರಕರಣ ದಾಖಲಾಗಿದೆ.

‘ವಿವಿಧ ಜಿಲ್ಲೆಯ ಫಲಾನುಭವಿಗಳಿಗೆ ನಿಗಮದಿಂದ ಒಟ್ಟು₹1.83 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ನಕಲಿ ಆದೇಶ ಹೊರಡಿಸಲಾಗಿದೆ. ಇದಕ್ಕೆ ನನ್ನ ಸಹಿ ನಕಲು ಮಾಡಲಾಗಿದೆ’ ಎಂದು ಲೀಲಾವತಿ ಅವರು ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ’‍ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಇದಕ್ಕಾಗಿ ಇಲಾಖೆಯ ಇ–ಮೇಲ್‌ ಖಾತೆಯನ್ನೂ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.