ADVERTISEMENT

ಸೈಕಲ್‌ ಗುಣಮಟ್ಟ ಪರಿಶೀಲನೆಗೆ ತಂಡ ರಚನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 19:08 IST
Last Updated 20 ಜೂನ್ 2019, 19:08 IST

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಅನುಮತಿ ನೀಡಿದ್ದಾರೆ.

ಜತೆಗೆ ಸೈಕಲ್‌ಗಳ ಜೋಡಣಾ ಸಮಯದಲ್ಲಿ ಗುಣಮಟ್ಟ ಪರಿಶೀಲಿಸಲು ಎರಡು ತಂಡಗಳನ್ನು ಸಹ ರಚಿಸಲಾಗಿದೆ.

ಶಾಲಾವಾರು ಬೇಕಾದ ಸೈಕಲ್‌ಗಳ ಪಟ್ಟಿಯನ್ನು ಆನ್‌ಲೈನ್‌ನಲ್ಲಿ ನಮೂದಿಸಬೇಕು. ಕಳೆದ ವರ್ಷ ಬಳಕೆಯಾಗದ ಸೈಕಲ್‌ಗಳನ್ನು ಮೊದಲಿಗೆ ವಿತರಿಸಿ, ಇನ್ನಷ್ಟು ಸೈಕಲ್‌ ಬೇಕಾದರೆ ಅದರ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.