ADVERTISEMENT

ಸೋಂಕಿತರ ಚಿಕಿತ್ಸೆಗೆ ಬಿಐಇಸಿಯಲ್ಲಿ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 22:31 IST
Last Updated 1 ಜುಲೈ 2020, 22:31 IST
ಕೋವಿಡ್ ಆಸ್ಪತ್ರೆಯಾಗಿ ಸಿದ್ಧಗೊಳ್ಳುತ್ತಿರುವ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ
ಕೋವಿಡ್ ಆಸ್ಪತ್ರೆಯಾಗಿ ಸಿದ್ಧಗೊಳ್ಳುತ್ತಿರುವ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ   

ಪೀಣ್ಯದಾಸರಹಳ್ಳಿ: ತುಮಕೂರು ರಸ್ತೆ ಮಾದಾವರ ಬಳಿಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ(ಬಿಐಇಸಿ) ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 7 ಸಾವಿರ ಹಾಸಿಗೆ ವ್ಯವಸ್ಥೆ ಮಾಡುವ ಕಾರ್ಯ ಭರದಿಂದ ಸಾಗಿದೆ.

5 ಸಭಾಂಗಣದಲ್ಲಿ ಶೌಚಾಲಯ, ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಲಾಗುತ್ತಿದೆ. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಇದೆ. ಚಿಕಿತ್ಸೆ ನೀಡುವ ವೈದ್ಯರು,ವೈದ್ಯಕೀಯ ಸಿಬ್ಬಂದಿ, ಭದ್ರತಾ ಸಿಬ್ಬಂದಿಗಳಿಗೆ ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ.

‘ಸರ್ಕಾರದ ಸೂಚನೆಯಂತೆ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಬಿಬಿಎಂಪಿದಾಸರಹಳ್ಳಿ ವಲಯದ ಜಂಟಿ ಆಯುಕ್ತ ನರಸಿಂಹಮೂರ್ತಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.