ADVERTISEMENT

ಬೆಂಗಳೂರು | ಆಟೊ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ: ಬಿಹಾರದ ಮಹಿಳೆಯ ಬಂಧನ, ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 15:17 IST
Last Updated 1 ಜೂನ್ 2025, 15:17 IST
<div class="paragraphs"><p>ಆಟೊ ಚಾಲಕನಿಗೆ ಹಲ್ಲೆ ನಡೆಸಿದ ಮಹಿಳೆ</p></div>

ಆಟೊ ಚಾಲಕನಿಗೆ ಹಲ್ಲೆ ನಡೆಸಿದ ಮಹಿಳೆ

   

ಚಿತ್ರ: ಎಕ್ಸ್‌

ಬೆಂಗಳೂರು: ಆಟೊ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂದೂರು ಪೊಲೀಸರು ಬಿಹಾರದ ಮಹಿಳೆಯನ್ನು ಬಂಧಿಸಿ, ಬಳಿಕ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ADVERTISEMENT

ಬೆಳ್ಳಂದೂರು ಸೆಂಟ್ರಲ್ ಮಾಲ್‌ ಬಳಿ ಶನಿವಾರ ಆಟೊ ಚಾಲಕರೊಬ್ಬರನ್ನು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದರು. ಈ ಸಂಬಂಧ ಚಾಲಕ ಲೋಕೇಶ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡರು.  

‘ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಆಧರಿಸಿ ಮಹಿಳೆಯನ್ನು ಪತ್ತೆ ಮಾಡಲಾಯಿತು. ನಗರದ ಐ.ಟಿ. ಕಂಪನಿ ಉದ್ಯೋಗಿಯಾಗಿರುವ ಪಂಕೂರಿ ಮಿಶ್ರಾ ಅವರು ಪಿ.ಜಿ ಯಲ್ಲಿ ವಾಸವಿದ್ದು, ಭಾನುವಾರ ಬೆಳಿಗ್ಗೆ ಅವರನ್ನು ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

‘ಗರ್ಭಿಣಿಯಾಗಿರುವ ನಾನು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ತೆರಳಿ ವಾಪಸ್ ಬರುತ್ತಿದ್ದೆ. ಆಗ ನನ್ನ ದ್ವಿಚಕ್ರ ವಾಹನಕ್ಕೆ ಆಟೊ ಡಿಕ್ಕಿಯಾಯಿತು. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಚಾಲಕ ನನ್ನನ್ನು ನಿಂದಿಸಿದ್ದಲ್ಲದೇ, ಸರಿಯಾಗಿ ವರ್ತಿಸಲಿಲ್ಲ. ಕೋಪಗೊಂಡು ಚಪ್ಪಲಿಯಲ್ಲಿ ಹಲ್ಲೆ ಮಾಡಿದ್ದೆ’ ಎಂದು ಮಹಿಳೆ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮಹಿಳೆಯ ಹೇಳಿಕೆ ದಾಖಲಿಸಿಕೊಂಡು, ಕರೆದಾಗ ವಿಚಾರಣೆಗೆ ಹಾಜರಾಗುವಂತೆ ಹೇಳಿ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದೇ ವೇಳೆ ಕನ್ನಡಪರ ಸಂಘಟನೆಗಳು ಠಾಣೆ ಮುಂದೆ ಜಮಾಯಿಸಿ, ಮಹಿಳೆಯನ್ನು ಬಂಧಿಸಿ, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದವು.

ಮಹಿಳೆ ಚಪ್ಪಲಿಯಿಂದ ಹೊಡೆಯುತ್ತಿರುವ ದೃಶ್ಯವು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.