ADVERTISEMENT

ಬಿಹಾರದ ಮಹಿಳೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 16:27 IST
Last Updated 21 ಫೆಬ್ರುವರಿ 2026, 16:27 IST
<div class="paragraphs"><p>ಬಂಧನ</p></div>

ಬಂಧನ

   

ಬೆಂಗಳೂರು: ಬಿಹಾರದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದ ಅಡಿ ಬಿಹಾರದ ಜಹಂಗೀರ್‌ (43) ಎಂಬಾತನನ್ನು ಗೋವಿಂದಪುರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

34 ವರ್ಷದ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಬಿಹಾರದ ದಂಪತಿ ಕೆಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಟೈಲರಿಂಗ್‌ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಜಹಂಗೀರ್‌ ಪರಿಚಯವಾಗಿತ್ತು. 2023ರಲ್ಲಿ ಸಂತ್ರಸ್ತೆಯ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದ. ಇತ್ತೀಚೆಗೆ ಸಂತ್ರಸ್ತೆಯನ್ನು ಸಂಪರ್ಕಿಸಿದ್ದ ಜಹಂಗೀರ್‌, ‘ವಿಡಿಯೊವೊಂದು ನನ್ನ ಬಳಿ ಇದೆ. ನನ್ನೊಂದಿಗೆ ಸಹಕರಿಸದಿದ್ದರೆ, ಆ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುತ್ತೇನೆ’ ಎಂದು ಬೆದರಿಸಿದ್ದ. ಅಲ್ಲದೇ ₹5 ಲಕ್ಷ ಹಣ ಕೊಡುವಂತೆಯೂ ಬೇಡಿಕೆಯಿಟ್ಟಿದ್ದ. ಇದರಿಂದ ಆತಂಕಗೊಂಡ ಸಂತ್ರಸ್ತೆ ಹಾಗೂ ಆಕೆಯ ಪತಿ ಗೋವಿಂದಪುರ ಪೊಲೀಸ್ ಠಾಣೆಗೆ‌ ದೂರು ನೀಡಿದ್ದರು.

‘ತನಿಖೆ ನಡೆಸಿ ಜಹಂಗೀರ್‌ನನ್ನು ಬಂಧಿಸಲಾಗಿದೆ. ಜಹಂಗೀರ್‌ ವಿಚಾರಣೆ ಹಾಗೂ ಆತನ ಮೊಬೈಲ್‌ ಪರಿಶೀಲನೆ ವೇಳೆ ಯಾವುದೇ ವಿಡಿಯೊ ಪತ್ತೆಯಾಗಿಲ್ಲ. ತನಿಖೆ ನಡೆಸಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.