ADVERTISEMENT

ಕೆಂಗೇರಿ: ಅಪಘಾತದಲ್ಲಿ ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 10 ಜನವರಿ 2024, 18:53 IST
Last Updated 10 ಜನವರಿ 2024, 18:53 IST
<div class="paragraphs"><p>ಸಾವು –ಪ್ರಾತಿನಿಧಿಕ ಚಿತ್ರ</p></div>

ಸಾವು –ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಮಂಗನಹಳ್ಳಿಯಲ್ಲಿ ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೊಡ್ಡಬೆಲೆ ನಿವಾಸಿ ಪ್ರಶಾಂತ್ ಅಲಿಯಾಸ್ ಪ್ರಸಾದ್ (27) ಮೃತ ಬೈಕ್ ಸವಾರ.

ADVERTISEMENT

ಎಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಪ್ರಶಾಂತ್‌ ಅವರು ಮಂಗಳವಾರ ರಾತ್ರಿ 9.15ರ ಸುಮಾರಿಗೆ ಮೈಸೂರು ರಸ್ತೆ ಕಡೆಯಿಂದ ಮಾಗಡಿ ರಸ್ತೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಮಂಗನಹಳ್ಳಿ ಸೇತುವೆ ಬಳಿ ಮುಂದೆ ಚಲಿಸುತ್ತಿದ್ದ ವಾಹನವನ್ನು ಹಿಂದಿಕ್ಕಲು ಹೋದಾಗ ವಾಹನಕ್ಕೆ ಡಿಕ್ಕಿ ಹೊಡೆದಿದ್ಧಾರೆ. ತೀವ್ರರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಕೆಂಗೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.