
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಮೆಂಟ್ ಮಿಕ್ಸರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿದ್ಯಾರಣ್ಯಪುರದ ದರ್ಶನ್ (57) ಮೃತ ಸವಾರ. ನಿವೇಶನ ಖರೀದಿಗೆಂದು ದರ್ಶನ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದರು. ಸಾತನೂರು– ಬಾಗಲೂರು ರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ದರ್ಶನ್ ಅವರು ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
ಅಪಘಾತ ಮಾಡಿದ ಬಳಿಕ ಲಾರಿ ಚಾಲಕ ಸ್ಥಳದಲ್ಲೇ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.