ADVERTISEMENT

ಬೆಂಗಳೂರು: ಹೆಲ್ಮೆಟ್‌ ಧರಿಸದೇ ಜೀವ ಕಳೆದುಕೊಂಡ ಸವಾರ

​ಪ್ರಜಾವಾಣಿ ವಾರ್ತೆ
Published 1 ಮೇ 2025, 16:06 IST
Last Updated 1 ಮೇ 2025, 16:06 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಮತ್ತಿಕೆರೆಯಲ್ಲಿರುವ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಬಳಿ ಬುಧವಾರ ರಾತ್ರಿ ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರರೊಬ್ಬರು ಮೃತಪಟ್ಟಿದ್ದಾರೆ.

ADVERTISEMENT

ತಮಿಳುನಾಡಿನ ಡೇವಿಡ್ ಸೆಂಗೋಲ್ (33) ಮೃತಪಟ್ಟವರು.

ಮತ್ತಿಕೆರೆಯ ಪೇಯಿಂಗ್ ಗೆಸ್ಟ್‌ನಲ್ಲಿ ನೆಲಸಿದ್ದ ಡೇವಿಡ್ ಅವರು ಲಾಂಡ್ರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ರಾತ್ರಿ ಪಿ.ಜಿ.ಗೆ ವಾಪಸ್ ಆಗುತ್ತಿದ್ದರು. ಆಗ ಘಟನೆ ನಡೆದಿದೆ.

ಡೇವಿಡ್ ಮತ್ತು ವಿಜಯ್ ಎಂಬುವರ ಬೈಕ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ತಲೆಗೆ ತೀವ್ರ ಗಾಯವಾಗಿದ್ದ ಡೇವಿಡ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿಜಯ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದರು.

ಅಪಘಾತದ ಸಂದರ್ಭದಲ್ಲಿ ಡೇವಿಡ್, ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ, ಅವರ ತಲೆಗೆ ಪೆಟ್ಟು ಬಿದ್ದಿದೆ. ಅವರ ಪತ್ನಿ ಮತ್ತು ಮಕ್ಕಳು ತಮಿಳುನಾಡಿನಲ್ಲಿ ನೆಲಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.