
ಪ್ರಜಾವಾಣಿ ವಾರ್ತೆ
ನೆಲಮಂಗಲ: ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ, ಕೆಳಗೆ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ತಬ್ರೇಜ್(29) ಮೃತ ಯುವಕ. ಪಟ್ಟಣದ ಬಿ.ಎಚ್ ರಸ್ತೆಯ ಲಯನ್ಸ್ ಕ್ಲಬ್ ಬಳಿ ನೀರಿನ ಪೈಪ್‌ಲೈನ್ ಅಳವಡಿಸಲು ರಸ್ತೆಗೆ ಅಡ್ಡಲಾಗಿ ಅಗೆದಿದ್ದ ಗುಂಡಿಯನ್ನು ಸರಿಯಾಗಿ ಮುಚ್ಚಿರಲಿಲ್ಲ. ಬುಧವಾರ ಬೈಕ್‌ನಲ್ಲಿ ಹೋಗುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
‘ಅಪಘಾತಕ್ಕೆ ನಗರಸಭೆ ನಿರ್ಲಕ್ಷ್ಯವೇ ಕಾರಣವಾಗಿದೆ’ ಆರೋಪಿಸಿ ಕುಟುಂಬಸ್ಥರು, ಸ್ನೇಹಿತರು ಪ್ರತಿಭಟಿಸಿದರು. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಅವರನ್ನು ಯಾರು ನೋಡಿಕೊಳ್ಳುತ್ತಾರೆ’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.