ಬೆಂಗಳೂರು: ಸ್ಯಾಂಕಿ ರಸ್ತೆಯಲ್ಲಿ ಬೈಕೊಂದು ಉರುಳಿಬಿದ್ದು ಅಪಘಾತ ಸಂಭವಿಸಿದ್ದು, ಸವಾರ ರಾಜೇಶ್ ಆಚಾರ್ಯ (28) ಮೃತಪಟ್ಟಿದ್ದಾರೆ.
‘ಯಶವಂತಪುರದ ನಿವಾಸಿ ರಾಜೇಶ್, ಮಣಿಪಾಲ್ ಆಸ್ಪತ್ರೆಯಲ್ಲಿ ಎ.ಸಿ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತ ಪರುಶುರಾಮ್ ಹಟ್ಟಿ ಜೊತೆ ಭಾನುವಾರ ರಾತ್ರಿ ವಿಧಾನಸೌಧ ವೀಕ್ಷಿಸಲು ಬೈಕ್ನಲ್ಲಿ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ’ ಎಂದು ಹೈಗ್ರೌಂಡ್ಸ್ ಸಂಚಾರ ಪೊಲೀಸರು ಹೇಳಿದರು.
‘ರಾಜೇಶ್ ಬೈಕ್ ಚಲಾಯಿಸುತ್ತಿದ್ದರು. ಹಿಂಬದಿಯಲ್ಲಿ ಪರುಶುರಾಮ್ ಕುಳಿತಿದ್ದರು. ಬೈಕ್ ಉರುಳಿದ್ದರಿಂದ ತೀವ್ರ ಗಾಯಗೊಂಡಿದ್ದ ಇಬ್ಬರನ್ನೂ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರಾಜೇಶ್ ಮಾರ್ಗಮಧ್ಯೆಯೇ ಮೃತಪಟ್ಟಿದ್ದರು. ಪರಶುರಾಮ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದ ಆರೋಪದಡಿ ರಾಜೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳ
ಲಾಗಿದೆ’ ಎಂದು ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.