ADVERTISEMENT

ಬೈಕ್‌ ಟ್ಯಾಕ್ಸಿ ಪ್ರಯಾಣ: ಹೊಸ ಮಾರ್ಗಸೂಚಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 22:10 IST
Last Updated 1 ಜುಲೈ 2025, 22:10 IST
   

ಬೆಂಗಳೂರು: ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯು ಮೋಟಾರು ವಾಹನಗಳ ಅಗ್ರಿಗೇಟರ್‌ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯನ್ನು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ. 

ಮಾರ್ಗಸೂಚಿಯ 23ನೇ ಅಂಶದಲ್ಲಿ ಸಾಮಾನ್ಯ ಬೈಕ್‌ಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದರಿಂದ ಆಗುವ ಅನುಕೂಲಗಳ ಬಗ್ಗೆ ವಿವರಿಸಲಾಗಿದೆ. ಬೈಕ್‌ ಟ್ಯಾಕ್ಸಿಗಳಿಗೆ ಅವಕಾಶ ನೀಡುವುದರಿಂದ ವಾಯು ಮಾಲಿನ್ಯ ತಗ್ಗಲಿದೆ. ದಟ್ಟಣೆ ಕಡಿಮೆ ಆಗಲಿದೆ ಎಂದು ವಿವರಿಸಲಾಗಿದೆ.

ರಾಜ್ಯ ಸರ್ಕಾರವು ತನಗಿರುವ ಅಧಿಕಾರ ಚಲಾಯಿಸಿ ಸಂಬಂಧಿಸಿದ ಸೆಕ್ಷನ್‌ಗಳ ಅಡಿ ಸಾಮಾನ್ಯ ಬೈಕ್‌ಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶ ಕಲ್ಪಿಸಬಹುದು. ಅಲ್ಲದೇ, ಪ್ರಯಾಣಿಕರು, ಪ್ರತಿನಿತ್ಯ, ವಾರಕ್ಕೆ ಒಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಪ್ರಯಾಣದ ದರ ಪಡೆದುಕೊಳ್ಳಬಹುದು ಎಂದು ಮಾ‌ರ್ಗಸೂಚಿಯಲ್ಲಿ ಹೇಳಲಾಗಿದೆ.

ADVERTISEMENT

ಬಸ್‌ಗಳು ಅಥವಾ ಇತರೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ತಲುಪದ ಸ್ಥಳಗಳಿಗೆ ಈ ಬೈಕ್ ಟ್ಯಾಕ್ಸಿಗಳು ತಲುಪಲಿವೆ. ಕಡಿಮೆ ದೂರದ ಪ್ರಯಾಣಕ್ಕೆ ಸಹಾಯ ಆಗಲಿದೆ. ಗಿಗ್ ಕೆಲಸಗಾರರಿಗೆ ಹಣ ಗಳಿಸಲು ಹೊಸ ಕೆಲಸ ಸಿಗಲಿದೆ ಎಂದು ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.