ADVERTISEMENT

ಬೆಂಗಳೂರು: 7 ದ್ವಿಚಕ್ರ ವಾಹನ ಜಪ್ತಿ, ಆರೋ‍ಪಿ ಬಂಧನ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 20:42 IST
Last Updated 5 ಮಾರ್ಚ್ 2023, 20:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದ ಹಲವು ಕಡೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಆರೋಪಿ ಮಜೀದ್ ಪಾಷಾ (21) ಎಂಬುವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

‘ಗೋರಿಪಾಳ್ಯದ ಸಂಗಮ್ ವೃತ್ತ ನಿವಾಸಿ ಮಜೀದ್, ಹಲವು ತಿಂಗಳಿನಿಂದ ಕೃತ್ಯ ಎಸಗಿದ್ದ. ಈತನಿಂದ ₹ 4.30 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸಾರ್ವಜನಿಕ ಸ್ಥಳ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ವಾಹನಗಳನ್ನು ಆರೋಪಿ ಕಳ್ಳತನ ಮಾಡುತ್ತಿದ್ದ. ಕದ್ದ ವಾಹನಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದ. ಬಂದ ಹಣವನ್ನು ದುಶ್ಚಟಗಳಿಗೆ ಖರ್ಚು ಮಾಡುತ್ತಿದ್ದ. ಬ್ಯಾಟರಾಯನಪುರ ಹಾಗೂ ಶಿವಾಜಿನಗರ ಠಾಣೆ ವ್ಯಾಪ್ತಿಯಲ್ಲಿ ವಾಹನ ಕದ್ದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.