ಬೆಂಗಳೂರು: ರಸ್ತೆಬದಿಯಲ್ಲಿ ಸಾರ್ವಜನಿಕರು ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ರಾಜರಾಜೇಶ್ವರಿ ನಗರದ ಚನ್ನಸಂದ್ರಲೇಔಟ್ ನಿವಾಸಿ ಮಂಜುನಾಥ್ ಅಲಿಯಾಸ್ ಮಂಜು ಬಂಧಿತ ಆರೋಪಿ.
ಕೆಂಗೇರಿಯ ಕೋಟೆ ಬೀದಿಯ ಮಾರಮ್ಮ ದೇವಸ್ಥಾನದ ಬಳಿ ನಿಲುಗಡೆ ಮಾಡಿದ್ದ ಬೈಕ್ ಕಳ್ಳತನವಾಗಿದೆ ಎಂದು ನಾರಾಯಣ ಮೂರ್ತಿ ಎಂಬುವರು ದೂರು ನೀಡಿದ್ದರು. ದೂರು ಆಧರಿಸಿ, ತನಿಖೆ ಕೈಗೊಂಡಾಗ ಆರೋಪಿ ಮಂಜು ಸರಣಿ ಕಳ್ಳತನ ನಡೆಸಿರುವುದು ಗೊತ್ತಾಗಿದೆ.
‘ಆರೋಪಿಯಿಂದ ₹1.14 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.