
ದ್ವಿಚಕ್ರ ವಾಹನಗಳು
ಬೆಂಗಳೂರು: ಬಂಡೇಪಾಳ್ಯ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ.
ರಿಷಬ್ ಚಕ್ರವರ್ತಿ, ಅಜೀವುಲ್ಲಾ ಹಾಗೂ ನಜೀವುಲ್ಲಾ ಬಂಧಿತರು. ಆರೋಪಿಗಳಿಂದ ₹20 ಲಕ್ಷ ಮೌಲ್ಯದ ಒಟ್ಟು 18 ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ರಿಷಬ್ ಚಕ್ರವರ್ತಿ ಬಿ.ಟೆಕ್ ಪದವಿ ಪಡೆದಿದ್ದರು. ಈ ಹಿಂದೆ ಕಳ್ಳತನ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲಿಗೆ ಹೋಗಿದ್ದರು. ಜೈಲಿನಿಂದ ಬಿಡುಗಡೆಯಾದ ಮೇಲೂ ಮತ್ತೆ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಆರೋಪಿಗಳ ಬಂಧನದಿಂದ ಬಂಡೇಪಾಳ್ಯ, ಎಲೆಕ್ಟ್ರಾನಿಕ್ ಸಿಟಿ, ಪರಪ್ಪನ ಅಗ್ರಹಾರ, ಗಿರಿನಗರ, ವಿವೇಕ್ ನಗರ, ಬಾಗಲಗುಂಟೆ, ರಾಜಗೋಪಾಲನಗರ, ಇಂದಿರಾನಗರ, ಕೆ.ಎಸ್.ಲೇಔಟ್, ಬಾಗಲಗುಂಟೆ ಹಾಗೂ ಹೆಣ್ಣೂರು ಠಾಣೆಗಳಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.