ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ನಗರದ ವಿವಿಧೆಡೆ ದ್ವಿಚಕ್ರ ವಾಹನ ಹಾಗೂ ಮೊಬೈಲ್ ದೋಚಿದ್ದ ಇಬ್ಬರು ದರೋಡೆಕೋರರನ್ನು ಬಂಧಿಸಿ, 11 ದ್ವಿಚಕ್ರ ವಾಹನ, ನಾಲ್ಕು ಮೊಬೈಲ್‌ಗಳನ್ನು ಕಲಾಸಿಪಾಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ .
ಸುರೇಶ್ ಮತ್ತು ಶಶಿಕುಮಾರ್ ಬಂಧಿತರು. ಮೇ 23ರಂದು ಮುಂಜಾನೆ 4 ಗಂಟೆ ಸುಮಾರಿನಲ್ಲಿ ಅರುಣ್ ಕುಮಾರ್ ಅವರು ಕೋಲಾರಕ್ಕೆ ಹೋಗಲು ಕಲಾಸಿಪಾಳ್ಯದ ಬಸ್ ನಿಲ್ದಾಣಕ್ಕೆ ಬಂದು ವಿಚಾರಿಸುತ್ತಿದ್ದರು. ಇದನ್ನು ಗಮನಿಸಿದ ಆರೋಪಿಗಳು ಹಿಂಬಾಲಿಸಿಕೊಂಡು ಹೋಗಿ, ಅವರನ್ನು ಬೆದರಿಸಿ ₹20 ಸಾವಿರ ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದರು.
ಈ ಬಗ್ಗೆ ಪ್ರಕರಣ ದಾಖಿಸಿಕೊಂಡು, ತನಿಖೆ ಕೈಗೊಂಡ ಪೊಲೀಸರು, ಮಾಹಿತಿಗಳನ್ನು ಕಲೆ ಹಾಕಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರು. ಕಳವು ಮಾಡಿರುವುದನ್ನು ಒಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದರು.
ಆರೋಪಿಗಳ ಬಂಧನದಿಂದ ಮಾಗಡಿ ರಸ್ತೆ, ತಾವರೆಕೆರೆ, ಬ್ಯಾಟರಾಯನಪುರ ಹಾಗೂ ಇತರೆ ಪೊಲೀಸ್ ಠಾಣೆಗಳಲ್ಲಿ ಕಳ್ಳತನವಾಗಿದ್ದ 11 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.