ADVERTISEMENT

ಬೆಂಗಳೂರು | ಪ್ರತ್ಯೇಕ ಪ್ರಕರಣ: ಇಬ್ಬರ ಬಂಧನ, 5 ದ್ವಿಚಕ್ರ ವಾಹನ ವಶ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2025, 23:40 IST
Last Updated 23 ಮಾರ್ಚ್ 2025, 23:40 IST
<div class="paragraphs"><p>ದ್ವಿಚಕ್ರ ವಾಹನ</p></div>

ದ್ವಿಚಕ್ರ ವಾಹನ

   

ಬೆಂಗಳೂರು: ಹನುಮಂತನಗರ ಹಾಗೂ ಪುಟ್ಟೇನಹಳ್ಳಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಹನುಮಂತನಗರ ಠಾಣಾ ವ್ಯಾಪ್ತಿಯ ಶ್ರೀನಗರದ ಅಪಾರ್ಟ್‌ಮೆಂಟ್‌ ನಿವಾಸಿ ಸೂರಜ್ ಅವರ ದ್ವಿಚಕ್ರ ವಾಹನ ಕಳವು ಆಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಶ್ರೀನಗರದ ಶಾಮಣ್ಣ ಉದ್ಯಾನ ಬಳಿ ಆರೋಪಿ ತೌಫೀಕ್ ಪಾಷಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ADVERTISEMENT

‘ಆರೋಪಿ ನೀಡಿದ ಮಾಹಿತಿ ಆಧರಿಸಿ ಕೆಂಪೇಗೌಡ ಆಟದ ಮೈದಾನದ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ₹1 ಲಕ್ಷ ಮೌಲ್ಯದ ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆರೋಪಿಯ ಬಂಧನದಿಂದ ಮೂರು ಪ್ರಕರಣ ಪತ್ತೆಯಾಗಿವೆ’ ಎಂದು ಪೊಲೀಸರು ತಿಳಿಸಿದರು.

ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಜಿ.ರಸ್ತೆ ನಿವಾಸಿ ಮೊಹದ್ದೀನ್‌ ಜಿಲಾನಿ ಅವರು ಮನೆ ಮುಂದೆ ನಿಲ್ಲಿಸಿದ್ದ ವಾಹನ ಕಳುವಾಗಿತ್ತು.

ಪ್ರಕರಣ ದಾಖಲಿಸಿಕೊಂಡು ಕಾರ್ಯಚರಣೆ ನಡೆಸಿದ ಪೊಲೀಸರು, ಬಿಎಂಟಿಸಿ ಬಸ್ ಡಿಪೊ ಬಳಿ ಆರೋಪಿ ಮಾರಿಮುತ್ತು ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡ ಎಂದು ಪೊಲೀಸರು ತಿಳಿಸಿದರು.‌

ಆರೋಪಿಯಿಂದ ₹60 ಸಾವಿರ ಮೌಲ್ಯದ ಎರಡು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.